ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನಾನು ಕಾರಣ ಅಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ ಎಂದ ಈಶ್ವರಪ್ಪ

Prasthutha|

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -

ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸಾಪ್ ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.

ಇದಕ್ಕೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಈಶ್ವರಪ್ಪ,ಸಂತೋಷ್ ಪಾಟೀಲೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ, ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಸಂತೋಷ್ ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದರು. ಆ ಕಾಪಿಯನ್ನು ನಾನು ತೆಗೆದುಕೊಂಡು ಗುತ್ತಿಗೆದಾರ ಸಂತೋಷ್ ವಿರುದ್ಧ  ಕೋರ್ಟ್‍ನಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ ಎಂದರು.



Join Whatsapp