ರಾಮನಗರ: ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಏ.17 ರಂದು ಅಧಿಕಾರ ಸ್ವೀಕರ ಮಾಡಲಿದ್ದಾರೆ.
ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದರು.
ಹಾಲಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದರು.