ನವದೆಹಲಿ: ವಕ್ಫ್ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಮ್ ಕೋರ್ಟ್ ನಕಾರ

Prasthutha|

ನವದೆಹಲಿ: ವಕ್ಫ್ ಕಾಯ್ದೆಯು ಹಿಂದೂಗಳು ಮತ್ತು ಇತರ ಮುಸ್ಲಿಮರೇತರ ಸಮುದಾಯಗಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕರೆದು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಮ್ ಕೋರ್ಟ್ ನಿರಾಕರಿಸಿದೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಮ್ ಕೋರ್ಟ್, ಶಾಸನಕ್ಕೆ ಸವಾಲೆಸೆಯುದನ್ನು ಅಥವಾ ಸಂಸತ್ತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು.

- Advertisement -

ನಿರ್ದಿಷ್ಟ ಪ್ರಕರಣದ ಸತ್ಯಗಳನ್ನು ನಮಗೆ ತೋರಿಸಿ, ನೀವು ಕಾನೂನಿನಡಿಯಲ್ಲಿ ಮೊಕದ್ದಮೆ ಹೂಡಿದ್ದರೆ ಶಾಸನಕ್ಕೆ ಎಸೆಯುವ ಸವಾಲುಗಳನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದ್ದಾರೆ.

ನಿಮ್ಮ ಆಸ್ತಿಯನ್ನು ತೆಗೆದುಕೊಳ್ಳಲಾಗಿದೆಯೇ ಅಥವಾ ನಿಮ್ಮನ್ನು ಹೊರಹಾಕಲಾಗಿದೆಯೇ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಈ ಸಂದರ್ಭದಲ್ಲಿ ಅರ್ಜಿದಾರರನ್ನು ಪ್ರಶ್ನಿಸಿದ್ದಾರೆ.



Join Whatsapp