ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ | ಕೊನೆಗೂ ಕೆಎಸ್ಇ ತಲೆದಂಡ

Prasthutha|

ನಾಳೆಯೇ ಸಿಎಂಗೆ ರಾಜೀನಾಮೆ ಪತ್ರ ರವಾನೆ

- Advertisement -

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ.

ಗುರುವಾದ ಸುದ್ದಿಗೋಷ್ಟಿ ನಡೆಸಿ ರಾಜೀನಾಮೆ ವಿಚಾರವನ್ನು ಪ್ರಕಟಿಸಿದ್ದಾರೆ.

- Advertisement -

ನಿನ್ನೆಯಷ್ಟೇ ಯಾವುದೇ ಕಾರಣಕ್ಕೂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದಿದ್ದ ಕೆಎಸ್ ಈಶ್ವರಪ್ಪ ಇಂದು ದಿಢೀರನೆ ಸುದ್ದಿಗೋಷ್ಟಿ ನಡೆಸಿ ರಾಜೀನಾಮೆ ಪ್ರಕಟಿಸಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ. ಆದರೆ, ಸಿಎಂ, ಪಕ್ಷದ ವರಿಷ್ಠರಿಗೆ ಮುಜುಗರ ತರಬಾರದು ಎನ್ನುವ ಉದ್ದೇಶದಿಂದ ರಾಜೀನಾಮೆ ನೀಡುತ್ತಿದ್ದೇನೆ. ನಾಳೆಯೇ ಬೆಂಗಳೂರಿಗೆ ತೆರಳಿ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಹಸ್ತಾಂತರಿಸುವುದಾಗಿ ತಿಳಿಸಿದರು.

ಬೆಳಗಾವಿ ಮೂಲದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಕರಣದ ಸಂಬಂಧ ಉಡುಪಿ ಪೊಲೀಸ್ ಠಾಣೆಯ ಡೆತ್ ನೋಟ್ ಆಧರಿಸಿ ಸಚಿವ ಈಶ್ವರಪ್ಪ ಸಹಿತ ಇನ್ನಿಬ್ಬರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಮೃತ ಸಂತೋಷ್ ಪಾಟೀಲ್ ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಶೇಕಡಾ 40ರಷ್ಟು ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.



Join Whatsapp