ವೈಫಲ್ಯ ಮುಚ್ಚಿಹಾಕಲು ಬಿಜೆಪಿ ಯಾವುದೇ ಹಂತಕ್ಕೆ ಇಳಿಯವ ಸಾಧ್ಯತೆ ಇರುವುದರಿಂದ ಅಲ್ಪಸಂಖ್ಯಾತರು ಪ್ರಚೋದನೆಗೆ ಒಳಗಾಗಬಾರದು: ಖಾದರ್

Prasthutha|

ಬೆಂಗಳೂರು: ಬಿಜೆಪಿ ಪಕ್ಷ ತನ್ನ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಯಾವುದೇ ಹಂತಕ್ಕೆ ಇಳಿಯುವ ಸಾಧ್ಯತೆಯಿದ್ದು, ಅಲ್ಪಸಂಖ್ಯಾತ ಸಮುದಾಯದವರು ಪ್ರಚೋದನೆಗೆ ಒಳಗಾಗಿ ಬಿಜೆಪಿಗೆ ಲಾಭವಾಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದು ವಿಧಾನ ಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.

- Advertisement -


ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪ್ರಚೋದನಾಕಾರಿ ಹೇಳಿಕೆ ಮತ್ತು ಘಟನೆಗಳಿಗೆ ಪ್ರತಿಕ್ರಯಿಸದೆ ಬಹಳಷ್ಟು ತಾಳ್ಮೆ ವಹಿಸಬೇಕು. ಪ್ರಚೋದನಕಾರಿ ಹೇಳಿಕೆ ಮೂಲಕ ಜನರನ್ನು ಉದ್ರೇಕಗೊಳಿಸಿ ಲಾಭ ಪಡೆದುಕೊಳ್ಳುವ ಸಾಧ್ಯತೆ ಇದ್ದು ಈ ಕುರಿತು ಎಚ್ಚರಿಕೆ ವಹಿಸ ಬೇಕು, ಅವರ ತಂತ್ರಗಾರಿಕೆ ವಿಫಲಗೊಳಿಸಬೇಕು ಎಂದು ಹೇಳಿದರು.

- Advertisement -


ಸಂತೋಷ್ ಪಾಟೀಲ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಹೋರಾಟವನ್ನು ಮುಂದುವರೆಸಲಿದೆ. ಈಗಾಗಲೇ ಮುಖ್ಯಮಂತ್ರಿ ಗಳು ಈ ವಿಚಾರದಲ್ಲಿ ಈಶ್ವರಪ್ಪ ಅವರು ನಿರಪರಾಧಿ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುವ ಅನುಮಾನವಿದ್ದು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.


ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತದಿಂದ ಲಕ್ಷಾಂತರ ಮಂದಿ ನರಳುತ್ತಿದ್ದಾರೆ. ಗುತ್ತಿಗೆದಾರರು ಶೇ40ರಷ್ಟು ಕಮಿಷನ್ ನೀಡದೆ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ಗಳನ್ನು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ಗುತ್ತಿಗೆದಾರರ ಸಂಘದವರು ಕೇಂದ್ರಕ್ಕೆ ಪತ್ರ ಬರೆದಿದ್ದರೂ ಕೇಂದ್ರ ನಾಯಕರು ಮೌನವಹಿಸಿದ್ದಾರೆ. ಕೇಂದ್ರ ನಾಯಕರೇ ಭ್ರಷ್ಟಾಚಾರಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದರು.



Join Whatsapp