ಬೆಂಗಳೂರು: ಎಸ್ ಪಿ ಶೋಭಾ ಕಟಾವ್ಕರ್(53) ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ.ನಗರದ ಐದನೇ ಹಂತದಲ್ಲಿರುವ ಅಪಾರ್ಟ್ಮೆಂಟ್ ಪ್ಲ್ಯಾಟ್ ನಲ್ಲಿ ಶೋಭಾ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ನಗರ ವಿಶೇಷ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶೋಭಾ ಕಟಾವ್ಕರ್ ರನ್ನು ಇದೇ ತಿಂಗಳು 11 ರಂದು ಎಸ್ಪಿಯಾಗಿ ಮುಂಬಡ್ತಿ ನೀಡಿ ಹುಬ್ಬಳ್ಳಿಯ ಹೆಸ್ಕಾಂಗೆ ಸರ್ಕಾರ ವರ್ಗಾವಣೆ ಮಾಡಿತ್ತು.
ಈ ನಡುವೆ ಶೋಭಾ ಅವರ ಕುಟುಂಬಸ್ಥರು ಕೆಲಸ ನಿಮಿತ್ತ ಹಾಸನಕ್ಕೆ ತೆರಳಿದ್ದರು. ಹೀಗಾಗಿ ಮನೆಯಲ್ಲಿ ಒಬ್ಬರೇ ಉಳಿದುಕೊಂಡಿದ್ದರು. ನಿನ್ನೆ ಸಂಜೆಯಿಂದಲೂ ಮನೆಯ ಸದಸ್ಯರು ನಿರಂತರವಾಗಿ ಫೋನ್ ಮಾಡಿದರೂ ರಿಸೀವ್ ಮಾಡದ ಪರಿಣಾಮ ಸೆಕ್ಯೂರಿಟಿ ಗಾರ್ಡ್ ಗೆ ಮನೆಗೆ ಹೋಗಿ ಪರಿಶೀಲಿಸುವಂತೆ ಹೇಳಿದ್ದಾರೆ. ಮನೆಗೆ ಹೋಗಿ ಪರಿಶೀಲಿಸಿದಾಗ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಈ ಬಗ್ಗೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.