ಪಂಜಾಬ್ । ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ಎಎಪಿ ಸರ್ಕಾರ

Prasthutha|

ಅಮೃತಸರ: ಇತ್ತೀಚೆಗೆ ಪಂಜಾಬ್ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಸರ್ಕಾರ, ಜುಲೈ 1 ರಿಂದ ಎಲ್ಲಾ ವರ್ಗದ ಪ್ರತಿ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ.

- Advertisement -

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜೂನ್ 29, 2021 ರಂದು ಘೋಷಿಸಿದ ಮೊದಲ ಚುನಾವಣಾ ಪೂರ್ವ ನಿರ್ಣಯಗಳಲ್ಲಿ ಒಂದಾಗಿದೆ ಎಂದು ಹೇಳಲಾಗಿದೆ.

ಸದ್ಯ ರಾಜ್ಯದಲ್ಲಿ ಈಗಾಗಲೇ ರೈತರು, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಬಿಪಿಎಲ್ ಕುಟುಂಬಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಮಾನ್ ಸರ್ಕಾರ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಮಾರ್ಚ್ 23 ರಂದು ಪ್ರಾರಂಭಿಸಿದ ಭ್ರಷ್ಟಾಚಾರ ವಿರೋಧಿ ಹೆಲ್ಫ್ ಲೈನ್, ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಹುತಾತ್ಮ ದಿನಾಚರಣೆ ಕುರಿತು ಜಾಹೀರಾತು ಪ್ರಕಟಿಸಿ ಗಮನ ಸೆಳೆದಿತ್ತು.

25,000 ಹೊಸ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವ ಘೋಷಣೆ, 35,000 ಗುತ್ತಿಗೆ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದು ಮತ್ತು ಬಡವರಿಗೆ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ಇತರ ಪ್ರಮುಖ ಸಾಧನೆಗಳು ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜಾರಿಗೆ ತರಲು ಪ್ರಯತ್ನಿಸಿತ್ತಾದರೂ ಈ ಮಾದರಿ ಯೋಜನೆಯನ್ನು ಕೇಂದ್ರ ಸರ್ಕಾರ ಆಕ್ಷೇಪಣೆ ಸಲ್ಲಿಸಿದ ಕಾರಣ ಈ ಯೋಜನೆಯನ್ನು ಕೈ ಬಿಡಬೇಕಾಯಿತು.

ಮಾತ್ರವಲ್ಲ ರೈತರಿಗೆ ಕನಿಷ್ಠ ಬೆಂಬಲ ಬೆಲೆ (MSP) ಪಾವತಿಸುವ ಸಲುವಾಗಿ ಅವರ ಬ್ಯಾಂಕ್ ಖಾತೆಗಳಿಗೆ 2000 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತವನ್ನು ವರ್ಗಾಯಿಸುವುದಾಗಿ ಸರ್ಕಾರ ಘೋಷಿಸಿದೆ ಮತ್ತು ಈಗಾಗಲೇ ಸುಮಾರು 828 ಕೋಟಿ ರೂ. ಗಳನ್ನು ವರ್ಗಾಯಿಸಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ ರೂ 1,000 ಸ್ಟೈಫಂಡ್ ಒದಗಿಸುವ ಮತ್ತೊಂದು ಪ್ರಮುಖ ಚುನಾವಣಾ ಪೂರ್ವ ಭರವಸೆಯನ್ನು ಸರ್ಕಾರವು ಇನ್ನೂ ಜಾರಿಗೊಳಿಸಬೇಕಾಗಿದೆ.



Join Whatsapp