ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಫ್ ರೂಮ್ ನಲ್ಲಿ ಹಿಗ್ಗಾಮುಗ್ಗ ಥಳಿತ

Prasthutha|

ಬೆಳಗಾವಿ:  ಕಾಲೇಜಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಸ್ಟಾಫ್ ರೂಮ್‍ ನಲ್ಲಿ ಉಪನ್ಯಾಸಕಿಯರೇ ಥಳಿಸಿರುವ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ.

- Advertisement -

ಆರೋಪಿಯನ್ನು ಅಮಿತ್ ಬಸವಮೂರ್ತಿ ಎಂದು ಗುರುತಿಸಲಾಗಿದೆ.

ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಬಸವಮೂರ್ತಿ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿ ಉಪನ್ಯಾಸಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಉಪನ್ಯಾಸಕಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಉಪನ್ಯಾಸಕಿಯರೆಲ್ಲಾ ಸೇರಿ ಆರೋಪಿಗೆ ಕಾಲಿನಿಂದ ಒದ್ದು, ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



Join Whatsapp