JDS ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

Prasthutha|

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಸ್ವೀಕಾರ ಮಾಡಿದ್ದಾರೆ.

- Advertisement -

ಪಕ್ಷದ ಕಚೇರಿಯಲ್ಲಿ ಭಾನುವಾರ ಪದಗ್ರಹಣ ನಡೆಯಿತು. ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಇದ್ದರು.

ಹಾಲಿ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

- Advertisement -

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು, ಪರಿಷತ್‌ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗೆ ಜೆಡಿಎಸ್‌ ಸೇರಿದ್ದರು.



Join Whatsapp