ಕೊರೋನಾ ಆಸ್ಪತ್ರೆಯಲ್ಲಿ ಬೆಂಕಿ ದುರಂತ: ಕೇಂದ್ರ, ಗುಜರಾತ್ ಸರಕಾರಗಳನ್ನು ಟೀಕಿಸಿದ ಸುಪ್ರೀಂ ಕೋರ್ಟ್

Prasthutha|

ಗುಜರಾತ್ ನ ರಾಜ್ ಕೋಟ್ ನಲ್ಲಿ ಕೊರೋನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಅಗ್ನಿದುರಂತದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ. ಡಿಸೆಂಬರ್ 1ರ ಒಳಗಾಗಿ ಈ ಕುರಿತು ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮತ್ತು ಗುಜರಾತ್ ಸರಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

- Advertisement -

ತನ್ನ ವರದಿಯಲ್ಲಿ ಬೆಂಕಿಯನ್ನು ತಡೆಯಲು ತೆಗೆದುಕೊಂಡ ಕ್ರಮವನ್ನು ವಿವರಿಸುವಂತೆ ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ಪೀಠವು ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಕೊರೋನಾ ವೈರಸ್ ರೋಗಿಗಳನ್ನು ಚಿಕಿತ್ಸಿಸಲು ಗೊತ್ತುಪಡಿಸಲಾದ ಆಸ್ಪತ್ರೆಯಲ್ಲಿ ಇದು ಮೊದಲ ಬೆಂಕಿ ದುರಂತವಲ್ಲ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

“ಈ ಘಟನೆಗಳು ಪುನರಾವರ್ತನಗೊಳ್ಳುತ್ತಿದೆ.  ರಾಜ್ಯಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಮತ್ತು ಪರಿಸ್ಥಿತಿಯನ್ನು ಸರಿಪಡಿಸಲು ಯಾವುದೇ ವಿಧಾನಗಳು ಇಲ್ಲದಿರುವುದನ್ನು ನಾವು ಗಮನಿಸಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

- Advertisement -

ವಿಷಯದ ಕುರಿತು ವಿಚಾರಣೆಯು ಆರಂಭವಾಗುತ್ತಿದ್ದಂತೆ ಇಂತಹ ಘಟನೆಗಳನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಸಾಮರ್ಥ್ಯದ ಕುರಿತು ನ್ಯಾಯಾಲಯ ಕಟುವಾಗಿ ಟೀಕಿಸಿತು.

ಈ ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದರು.



Join Whatsapp