ಕಲಬುರಗಿ: ರಾಜ್ಯ PSI ನೇಮಕಾತಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸಿಐಡಿ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸುತ್ತಿದ್ದಂತೆ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಒಂದು ವಾರವಾದರೂ ವಿಚಾರಣೆಗೆ ಹಾಜರಾಗಿಲ್ಲ. ಮನೆ ಮೇಲೆ ದಾಳಿ ಮಾಡಿ ದಿವ್ಯಾ ಅವರ ಪತಿ ರಾಜೇಶನನ್ನು ಬಂಧಿಸಿದರೂ ಇಲ್ಲಿಯವರೆಗೆ ದಿವ್ಯಾ ಪತ್ತೆಯಾಗಿಲ್ಲ. ಸದ್ಯ ಸಿಐಡಿ ಪೊಲೀಸರ ಬಂಧನದ ಭೀತಿಯಿಂದಾಗಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರ ಮೂಲಕ ಕಲಬುರಗಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿದೆ. ದಿವ್ಯಾ ಹಾಗರಗಿ ಅಲ್ಲದೆ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್, ಸಹ ಶಿಕ್ಷಕಿ ಅಶ್ವಿನಿ ಕೂಡಾ ಸಿಐಡಿ ಕೈಗೆ ಸಿಗದೆ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.