ಮಂಗಳೂರು: ಮಳಲಿ ಮಸೀದಿ ನವೀಕರಣಕ್ಕೆ ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ

Prasthutha|

ಮಂಗಳೂರು: ನವೀಕರಣಕ್ಕೆ ಮುಂದಾಗಿದ್ದ ನಗರದ ಬಜ್ಪೆ ಠಾಣಾ ವ್ಯಾಪ್ತಿಯ ಮಳಲಿ ಜುಮ್ಮಾ ಮಸೀದಿಯ ವಿರುದ್ಧ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

- Advertisement -

ಮಸೀದಿ ನವೀಕರಣ ಕಾಮಗಾರಿಗೆ ತಡೆಯಾಜ್ಞೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಮುಂದಿನ ಆದೇಶದವರೆಗೂ ಮಳಲಿ ಜುಮ್ಮಾ ಮಸೀದಿಯಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಹಾಗೂ ಯಥಾ ಸ್ಥಿತಿ ಕಾಪಾಡದಂತೆ ನ್ಯಾಯಾಲಯವು ಸೂಚಿಸಿದೆ.

ಗುರುವಾರ ಬೆಳಿಗ್ಗೆ ಜಾಲತಾಣದಲ್ಲಿ ಮಸೀದಿಯೊಳಗಡೆ ದೇವಸ್ಥಾನವಿದೆ ಎಂದು ವದಂತಿ ಹಬ್ಬಿಸಿದ್ದರ ಪರಿಣಾಮ ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಸ್ಥಳಕ್ಕೆ ಆಗಮಿಸಿದ್ದ ಸಂಘ ಪರಿವಾರದ ಕೆಲ ನಾಯಕರು ತಹಶೀಲ್ದಾರ್ ಅವರಿಗೆ ಕಾಮಗಾರಿ ನಿಲ್ಲಿಸುವಂತೆ ಆದೇಶಿಸಲು ಒತ್ತಡವೇರಿ ಗೊಂದಲ ಸೃಷ್ಟಿ ಮಾಡಿದ್ದರು.

- Advertisement -

ತಾತ್ಕಾಲಿಕ ತಡೆಯಾಜ್ಞೆ ವಿಧಿಸಿರುವುದರ ವಿರುದ್ಧ ಕಾನೂನು ಹೋರಾಟಕ್ಕೆ ಮಸೀದಿಯ ಆಡಳಿತ ಮಂಡಳಿಯು ನಿರ್ಧರಿಸಿದೆ.



Join Whatsapp