ನವದೆಹಲಿ: ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇನ್ನೆರಡು ದಿನಗಳ್ಲಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ರಮಣ ಅವರು, ಅರ್ಜಿಯನ್ನು ಲಿಸ್ಟ್ ಮಾಡುತ್ತೇವೆ, ಇನ್ನೆರಡು ದಿನ ಕಾಯಿರಿ ಎಂದು ಹೇಳಿದರು.
ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ ಎಂದು ಹೇಳಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತ್ವರಿತ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರು ಮನವಿ ಮಾಡಿಕೊಂಡಾಗ, ಇನ್ನೆರಡು ದಿನ ಕಾಯಿರಿ, ಅರ್ಜಿಯನ್ನು ಲಿಸ್ಟ್ ಮಾಡುತ್ತೇನೆ ಎಂದು ಹೇಳಿದರು.