ಹೊಸದಿಲ್ಲಿ: ನನ್ನನ್ನು ಸಿಎಂ ಮಾಡದೇ ಇದ್ದರೆ, ಪಂಜಾಬ್ ನಂತೆಯೇ ಕಾಂಗ್ರೆಸ್ ಪಕ್ಷ ರಾಜಸ್ಥಾನವನ್ನು ಕಳೆದುಕೊಳ್ಳಲಿದೆ ಎಂದು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಚಿನ್ ಪೈಲಟ್ ಎಚ್ಚರಿಕೆ ನೀಡಿದ್ದಾರೆ.
ಡಿಸೆಂಬರ್ 2023 ರಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಪಕ್ಷವು ಮತ್ತೆ ಅಧಿಕಾರಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಚುನಾವಣೆಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯವಿದ್ದು, ನಾನು ಶೀಘ್ರವೇ ರಾಜಸ್ಥಾನದ ಮುಖ್ಯಮಂತ್ರಿಯಾಗಲು ಬಯಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೋನಿಯಾ ಗಾಂಧಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.