PSI ನೇಮಕಾತಿಯಲ್ಲಿ ಅಕ್ರಮ: ಮರು ಪರೀಕ್ಷೆ ನಡೆಸಲು ಸರಕಾರ ನಿರ್ಧಾರ

Prasthutha|

ಬೆಂಗಳೂರು; ರಾಜ್ಯದಲ್ಲಿ ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮರು ಪರೀಕ್ಷೆ ನಡೆಸಲು ಸರಕಾರ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶೀಘ್ರದಲ್ಲೇ ಪರೀಕ್ಷೆಯ ದಿನಾಂಕ ನಿಗದಿಪಡಿಸುತ್ತೇವೆ, ಪ್ರಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

- Advertisement -

ಇಂದು ಡಿಜಿ ಪ್ರವೀಣ್ ಸೂದ್ , ಪೊಲೀಸ್ ಆಯುಕ್ತ ಕಮಲ್ ಪಂತ್. ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸಿದ್ದರು. ಸಭೆಯ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಕರಣವನ್ನು ಸರಕಾರ ಸಿಐಡಿಗೆ ವಹಿಸಿತ್ತು. ಅದರಂತೆ ಅಕ್ರಮ ನೇಮಕಾತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಕರಣದ ಕಿಂಗ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

- Advertisement -

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp