ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಕರಾವಳಿ ಸೇರಿದಂತೆ
ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.