ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗರಿಷ್ಠ ಉಷ್ಣಾಂಶ ಏರಿಕೆ ಏರಿಕೆಯಾಗಿದ್ದು, ಉರಿ ಸೆಕೆ ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇದ್ದು, ಸೆಕೆಯು ಹೆಚ್ಚಾಗಿತ್ತು. 34.7 ಡಿ.ಸೆ ಗರಿಷ್ಠ ಉಷ್ಣಾಂಶ ಮತ್ತು 26 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿತ್ತು.
ಅಲ್ಲದೆ ಇಂದು ಕರಾವಳಿ ಭಾಗದಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.