ಪಾಟಿಯಾಲ: ಖಾಲಿಸ್ತಾನ ವಿರೋಧಿ ಪ್ರತಿಭಟನೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಸಂಬಂಧಿಸಿದಂತೆ ವದಂತಿ ಹರಡುವುದನ್ನು ತಡೆಯುವ ಸಲುವಾಗಿ ನಗರದಲ್ಲಿ ಮೊಬೈಲ್ ಇಂಟರ್ ನೆಟ್ ಮತ್ತು SMS ಸೇವೆಗಳನ್ನು ನಿರ್ಬಂಧಿಸಲಾಗಿದೆ.
ಕರೆಗಳನ್ನು ಹೊರತುಪಡಿಸಿ ಮೊಬೈಲ್ ಇಂಟರ್ ನೆಟ್ ಮತ್ತು SMS ಸೇವೆಗಳನ್ನು ಜಿಲ್ಲೆಯಲ್ಲಿ ಸ್ಥಗಿತಗೊಳಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಬೈಲ್ ಕರೆ ಹೊರತುಪಡಿಸಿ “ಮೊಬೈಲ್ ಇಂಟರ್ನೆಟ್ ಸೇವೆಗಳು (2G/3G/4G/CDMA), ಎಲ್ಲಾ SMS ಸೇವೆಗಳು ಮತ್ತು ಎಲ್ಲಾ ಡಾಂಗಲ್ ಸೇವೆಗಳು ಇತ್ಯಾದಿಗಳನ್ನು ನಿರ್ಬಂಧಿಸುವಂತೆ ಪಂಜಾಬ್ ನ ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರು ಮತ್ತು BSNL ನ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಸೇನಾ ಕಾರ್ಯಕರ್ತರು ಖಾಲಿಸ್ತಾನ್ ಮುರ್ದಾಬಾದ್ ಜಾಥಾವನ್ನು ಆರಂಭಿಸಿದಾಗ ಕಾಳಿ ಮಾತಾ ದೇವಸ್ಥಾನದ ಹೊರಗೆ ಘರ್ಷಣೆ ಉಂಟಾಗಿದೆ. ಘರ್ಷಣೆಯಿಂದಾಗಿ ಎರಡು ಗುಂಪುಗಳ ಸದಸ್ಯರ ನಡುವೆ ಪರಸ್ಪರ ತಲವಾರು ಕಾಳಗ ಮತ್ತು ಕಲ್ಲು ತೂರಾಟ ನಡೆಸಿದ್ದರು.
ಘರ್ಷಣೆಯಲ್ಲಿ ನಾಲ್ವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.
ಘಟನೆಗೆ ಸಂಬಂಧಿಸಿದಂತೆ ಐಜಿಪಿ (ಪಾಟಿಯಾಲ ರೇಂಜ್), ಪಾಟಿಯಾಲ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸೂಪರಿಡೆಂಟ್ ಆಫ್ ಪೊಲೀಸ್ ಅವರನ್ನು ಹುದ್ದೆಗಳಿಂದ ವರ್ಗಾವಣೆ ಮಾಡಲಾಗಿದೆ.