ರಾಹುಲ್ ಗಾಂಧಿ ಭೇಟಿಗೆ ಅನುಮತಿಸದ ಉಸ್ಮಾನಿಯ ವಿವಿ: ಕಾಂಗ್ರೆಸ್ ನಿಂದ ಪ್ರತಿಭಟನೆ

Prasthutha|

ತೆಲಂಗಾಣ: ಮೇ 7 ರಂದು ನಡೆಯುವ ರಾಜಕೀಯೇತರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಸ್ಮಾನಿಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ಅನುಮತಿ ನಿರಾಕರಿಸಿದ್ದು, ಸಂಸ್ಥೆಯ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ ಎಂದು ವರದಿಯಾಗಿದೆ.

- Advertisement -

ಟಿಆರ್‌ಎಸ್ ನೇತೃತ್ವದ ರಾಜ್ಯ ಸರ್ಕಾರವು ಕಾಂಗ್ರೆಸ್ ನಾಯಕನ ಭೇಟಿಯನ್ನು ತಡೆಯಲು ವಿವಿ ಮೇಲೆ ಒತ್ತಡ ಹೇರಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಕೆಲವು ವಿದ್ಯಾರ್ಥಿಗಳು ತೆಲಂಗಾಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ವಿವಿಯ ಸಿಬ್ಬಂದಿಯೋರ್ವರು, 2017 ರಿಂದ ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿಯು ಕ್ಯಾಂಪಸ್ ನಲ್ಲಿ ರಾಜಕೀಯ ಸಭೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಶ್ವವಿದ್ಯಾಲಯದ ನಿರ್ಧಾರವನ್ನು ವಿರೋಧಿಸಿ ಯುವ ಕಾಂಗ್ರೆಸ್ ಮುಖಂಡರು ಮತ್ತು ಬೆಂಬಲಿಗರು ಶನಿವಾರ ಕಲಾ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.



Join Whatsapp