ಕೊರೋನಾ ಕಡಿಮೆಯಾದ ತಕ್ಷಣ CAA ಜಾರಿ: ಅಮಿತ್ ಶಾ

Prasthutha|

ಕೊಲ್ಕತ್ತಾ: ಕೊರೋನಾ ಸೋಂಕು ಕಡಿಮೆಯಾದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -

ಈ ಬಗ್ಗೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೊಳಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೋವಿಡ್ ಅಲೆ ಕಡಿಮೆಯಾದ ತಕ್ಷಣ ನಾವು ಸಿಎಎ ಅನ್ನು ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಈ ಮೂಲಕ  ಮೂಲಕ ವಿವಾದಾತ್ಮಕ ಪೌರತ್ವ ಕಾನೂನು ಕೇಂದ್ರದ ಕಾರ್ಯಸೂಚಿಗೆ ಮರಳಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.



Join Whatsapp