ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ಹಗುರಗೊಳಿಸಲು ಚಿಂತನೆ: ಸಚಿವ ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಮ್ ವರ್ಕ್  ಹಗುರಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ಹಗುರಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು,  3ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಹೋಮ್ ವರ್ಕ್  ಸರ್ಕಾರ ಅನುಮತಿಸುವುದಿಲ್ಲ ಎಂದು ಹೇಳಿದರು.

ಈ ಹಿಂದೆ ರಾಜ್ಯ ಸರ್ಕಾರ ಮಕ್ಕಳಿಗೆ ಹೋಮ್ ವರ್ಕ್ ರದ್ದುಗೊಳಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದರು. ಇದಕ್ಕೆ ಮಕ್ಕಳ ತಜ್ಞರು ಕೂಡಾ ಬೆಂಬಲ ಸೂಚಿಸಿದ್ದಾರೆ. ಇದೀಗ ಶಿಕ್ಷಣ ಸಚಿವ ಹೋಮ್ ವರ್ಕ್ ಹಗುರಗೊಳಿಸುವ ಕುರಿತು ಹೇಳಿಕೆ ನೀಡಿದ್ದಾರೆ.



Join Whatsapp