ಕಲಬುರಗಿ: ರಾಜ್ಯದ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬಿಜೆಪಿ ನಾಯಕರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಈ ಮಧ್ಯೆ ಕಲಬುರಗಿ ನಗರದ ವಿವಿಧ ಠಾಣೆಗಳ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಸ್ಟೇಷನ್ ಬಜಾರ್ ಠಾಣೆಯ ಮೂವರು ಪೊಲೀಸರು ಸೇರಿದಂತೆ ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಅಮಾನತ್ತು ಆದೇಶ ಹೊರಬೀಳುವ ಸಾಧ್ಯತೆಯಿದೆ. ಅಮಾನತುಗೊಂಡಿರುವ ಪೊಲೀಸ್ ಸಿಬ್ಬಂದಿ ಪಿಎಸ್ ಐ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದರು.