ಶ್ರಿಲಂಕಾದಲ್ಲಿ ಮತ್ತೆ ಘೋಷಣೆಯಾಯ್ತು ತುರ್ತು ಪರಿಸ್ಥಿತಿ !

Prasthutha|

ಕೊಲಂಬೊ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, 5 ವಾರಗಳಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

- Advertisement -

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ಹಿನ್ನೆಲೆಯಲ್ಲಿ ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ಆರ್ಥಿಕ ಬಿಕ್ಕಟ್ಟಿನ ವಿರುದ್ಧ ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿತ್ತು. ಇದೀಗ ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೋಟಬಯ ರಾಜಪಕ್ಸ ವಕ್ತಾರರು ತಿಳಿಸಿದ್ದಾರೆ.

ಕಳೆದ ತಿಂಗಳಿನಿಂದ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿತ್ತು. ಆರ್ಥಿಕ ಸಮಸ್ಯೆಯಿಂದ ಶ್ರೀಲಂಕಾದಲ್ಲಿ ಆಹಾರವಸ್ತು, ಇಂಧನ ಮತ್ತು ಔಷಧದ ತೀವ್ರ ಕೊರತೆ ಉಂಟಾಗಿದೆ. ತೀವ್ರ ಬೆಲೆಏರಿಕೆಯ ವಿರುದ್ಧ ದಂಗೆ ಎದ್ದಿರುವ ಲಂಕನ್ನೀಯರು ಸರಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಸರಕಾರ ಪ್ರತಿಭಟನೆ ಹತ್ತಿಕ್ಕಲು ಈ ಹಿಂದೆ ಗೋಲಿಬಾರ್ ಅನ್ನೂ ನಡೆಸಿತ್ತು. ಇದೀಗ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಿದೆ.



Join Whatsapp