ಬಿಜೆಪಿ ಸರಕಾರಕ್ಕೆ ಗಟ್ಸ್, ತಾಕತ್ತು ಇಲ್ಲ: ಪ್ರಮೋದ್ ಮುತಾಲಿಕ್

Prasthutha|

- Advertisement -

ಮಂಡ್ಯ: ಉತ್ತರ ಪ್ರದೇಶ ಆದಿತ್ಯನಾಥ್ ಸರ್ಕಾರ 60 ಸಾವಿರ ಮೈಕ್ ತೆರವುಗೊಳಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಅಂತಹ ಏಕೆ ಗಟ್ಸ್‌ ತೋರಿಸುತ್ತಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಕ್‌ಗಳನ್ನು ನಿಷೇಧಿಸುವ ಕೆಲಸ ನಮ್ಮ ರಾಜ್ಯದಲ್ಲಿ ಏಕೆ ಆ ಕೆಲಸ ಆಗುತ್ತಿಲ್ಲ? ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರು ಏಕೆ ಯೋಗಿ ರೀತಿ ಗಡ್ಸ್ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಮುತಾಲಿಕ್, ಸುಪ್ರೀಂ ಆದೇಶ ಎಲ್ಲರಿಗೂ ಒಂದೇ. ನೀವು ಹೊಸ ನಿಯಮ ಮಾಡಬೇಕಿಲ್ಲ. ಸರ್ಕಾರ ಆದೇಶ ಪಾಲಿಸದೇ ಇರೋದ್ರಿಂದ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

- Advertisement -

ನಾಳೆಯಿಂದಲೇ ಹಿಂದೂ ಸಂಘಟನೆಗಳಿಂದ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ಭಕ್ತಿಗೀತೆಗಳ ಪ್ರಸಾರ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಮಂಡ್ಯದ ಕಲ್ಲಹಳ್ಳಿಯ ಹನುಮ ಮಂದಿರ ಸೇರಿದಂತೆ 3 ದೇವಾಲಯಗಳಲ್ಲಿ ಬೆಳಗ್ಗೆ 5 ಗಂಟೆಗೆ ಚಾಲನೆ ನೀಡಲಾಗುತ್ತಿದೆ. ನಾಳೆಯ ಅಭಿಯಾನ ತಡೆಯಲು ಬಂದರೆ ಸಂಘರ್ಷ ಖಂಡಿತಾ, ಪೊಲೀಸರು ನಮ್ಮ ಅಭಿಯಾನ ತಡೆಯುವುದಲ್ಲ, ಮಸೀದಿಗಳಲ್ಲಿ ಮೈಕ್ ಅಳವಡಿಸುವುದನ್ನು ತಡೆಯಲಿ ಎಂದು ಹೇಳಿಕೆ ನೀಡಿದ್ದಾರೆ.



Join Whatsapp