19 ಲಕ್ಷ ಇವಿಎಂ ಯಂತ್ರ ನಾಪತ್ತೆಯಾಗಿರುವ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ: ಎಚ್.ಕೆ.ಪಾಟೀಲ್

Prasthutha|

➤ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡಿರುವ ಬಗ್ಗೆ ಜನರಿಗೆ ಅನುಮಾನವಿದೆ

- Advertisement -

ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ.
ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇವಿಎಂ ಯಂತ್ರಗಳ ನಾಪತ್ತೆಗೆ ಸಂಬಂಧಿಸಿದಂತೆ ಪೂರಕವಾಗಿ 2750 ಪುಟಗಳ ಕಾಗದ ಪತ್ರಗಳನ್ನು ಇಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಕೆ ಮಾಡಿದ್ದೇನೆ ಎಂದರು.

ಮನೊರಂಜನ್ ಸಂತೋಷ್ ರಾಯ್ ಎಂಬುವವರು ಈ ಸಂಬಂಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ಮಾಹಿತಿಗಳನ್ನು ಸ್ಪೀಕರ್ ಅವರಿಗೆ ಸಲ್ಲಿಕೆ ಮಾಡಿದ್ದೇನೆ. ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನು ಸಹ ಚರ್ಚೆಯಲ್ಲಿ ಭಾಗಿಯಾಗಿದ್ದೆ. ಹಲವಾರು ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಿದ್ದರು. ನಾನು ಮಾತನಾಡುವಾಗ ಸದನದಲ್ಲಿ ನಾಲ್ಕೈದು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಮೊದಲನೆಯದ್ದು ಇವಿಎಂ ಯಂತ್ರಗಳೂ ಕಾಣೆಯಾಗಿರುವ ಬಗ್ಗೆ ಪ್ರಸ್ತಾಪ ಮಾಡಿದ್ದೆ.

- Advertisement -

ನ್ಯಾಯಾಲಯಗಳಲ್ಲಿ ಚುನಾವಣೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ತಡವಾಗುವುತ್ತಿರುವ ಬಗ್ಗೆ ಹಾಗೂ ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡುವ ಬಗ್ಗೆ ಬಹಳಷ್ಟು ಜನರಿಗೆ ಅನುಮಾನವಿದೆ. ಇದನ್ನು ಹೋಗಲಾಡಿಸಬೇಕಾದ ಅಗತ್ಯವಿದೆ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಭಾರತೀಯ ಚುನಾವಣಾ ಆಯೋಗ ಮಾಡಬೇಕು ಎಂದು ಅವರು ಅವರು ಆಗ್ರಹಿಸಿದರು.

ಕಟೀಲ್ ವಿರುದ್ಧ ಕಿಡಿ: ಪಿಎಸ್ಐ ಹಗರಣ, 40% ಹಗರಣ, ಸಂತೋಷ್ ಪಾಟೀಲ್ ಆತ್ಮಹತ್ಯೆ, ದಿಂಗಾಲೇಶ್ವರ ಶ್ರೀಗಳ ಆರೋಪದ ನಂತರವೂ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡು ಮಾತನಾಡುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಎಚ್.ಕೆ.ಪಾಟೀಲ್ ಕಿಡಿಕಾರಿದರು



Join Whatsapp