ಮುಂಬೈ: ಭೂಗತ ದೊರೆ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ದಳ ಸೋಮವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಮುಂಬೈನಲ್ಲಿರುವ ದಾವೂದ್ ಆಪ್ತ ಸಲೀಂ ಅವರ ನಿವಾಸದ ಮೇಲೆ ಎನ್ ಐಎ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಿದ್ದು, ಕೆಲವು ಮಹತ್ವದ ದಾಖಲೆಗಳನ್ನೂ ವಶಪಡಿಸಿಕೊಂಡಿದ್ದಾರೆ.
ಮುಂಬೈಯ 12ಕ್ಕೂ ಹೆಚ್ಚು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರು ಮತ್ತು ಹವಾಲಾ ದಂಧೆ ನಡೆಸುವವರ ಮೇಲೆ ಎನ್ ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ದಾವೂದ್ ನೊಂದಿಗೆ ಸಂಬಂಧ ಹೊಂದಿದ್ದ ಹವಾಲಾ ಆಪರೇಟರ್ ಗಳು ಮತ್ತು ಡ್ರಗ್ ಪೆಡ್ಲರ್ ಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರಂತೆ ಇಂದು ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.