ಶಾಹೀನ್ ಬಾಗ್ ತೆರವು ಕಾರ್ಯಾಚರಣೆಗೆ ಅಡ್ಡಿ ಆರೋಪ | ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಪ್ರಕರಣ ದಾಖಲು

Prasthutha|

ನವದೆಹಲಿ: ಶಾಹೀನ್ ಬಾಗ್ ನಲ್ಲಿ ಅತಿಕ್ರಮಣ ವಿರೋಧಿ ಅಭಿಯಾನಕ್ಕೆ ಅಡ್ಡಿಪಡಿಸಿದ ಆರೋಪದ ಅಡಿಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಮತ್ತು ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -


ನೂರಾರು ಸ್ಥಳೀಯ ನಿವಾಸಿಗಳು, ರಾಜಕಾರಣಿಗಳು ಮತ್ತು ಶಾಸಕ ಅಮಾನತುಲ್ಲಾ ಖಾನ್ ಅವರು ಕಟ್ಟಡಗಳನ್ನು ತೆರವುಗೊಳಿಸಲು ಬಿಡದೆ ಪಾಲಿಕೆ ಅಧಿಕಾರಿಗಳು ಹಿಂದಿರುಗುವಂತೆ ಒತ್ತಾಯಿಸಿದ ಬಳಿಕ ದಕ್ಷಿಣ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಸದ್ಯ ಈ ದೂರಿನನ್ವಯ ದೆಹಲಿ ಪೊಲೀಸರು ಖಾನ್ ಮತ್ತು ಬೆಂಬಲಿಗರ ವಿರುದ್ಧ ಐಪಿಸಿ ಸೆಕ್ಷನ್ 186, 353, 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದ ಕೇಂದ್ರ ಬಿಂದುವಾಗಿದ್ದ ಶಾಹೀನ್ ಬಾಗ್, ಹೆಚ್ಚಿನ ಮುಸ್ಲಿಮ್ ಜನಸಂಖ್ಯೆಯನ್ನು ಹೊಂದಿದೆ. ಬಿಜೆಪಿ ಆಡಳಿತವಿರುವ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹಾಗೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದ್ದರು.

- Advertisement -


ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸಿಕೊಂಡು ಧ್ವಂಸಗೊಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತೀವ್ರ ಪ್ರತಿಭಟನೆಯ ಬಳಿಕ ಶಾಹೀನ್ ಬಾಗ್ ನಲ್ಲಿ ತೆರವು ಕಾರ್ಯಾಚರಣೆ ವಿರೋಧಿ ಅಭಿಯಾನವನ್ನು ಸ್ಥಗಿತಗೊಳಿಸಲಾಗಿತ್ತು.



Join Whatsapp