ನವದೆಹಲಿ: ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಹಿಜಾಬ್ ಕಡ್ಡಾಯಗೊಳಿಸಿ ತಾಲಿಬಾನ್ ಆದೇಶ ಹೊರಡಿಸಿದ ನಂತರ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ ರಝಾಯ್ ಅಫ್ಘಾನಿಸ್ತಾನದ ಮಹಿಳೆಯರು ಮತ್ತು ಹುಡುಗಿಯರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
“ತಾಲಿಬಾನ್ ಗಳು ಅಫ್ಘಾನಿಸ್ತಾನದ ಹುಡುಗಿಯರನ್ನು ಶಾಲೆಯಿಂದ ಹೊರಗಿಡಲು ಮತ್ತು ಮಹಿಳೆಯರನ್ನು ಕೆಲಸದಿಂದ ದೂರವಿಡಲು ಹಾಗೂ ಎಲ್ಲಾ ಸಾರ್ವಜನಿಕ ಜೀವನದಿಂದ ಹುಡುಗಿಯರು ಮತ್ತು ಮಹಿಳೆಯರನ್ನು ಅಳಿಸಲು ಬಯಸುತ್ತಿದ್ದಾರೆ ”ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.
ಲಕ್ಷಾಂತರ ಮಹಿಳೆಯರು ಮತ್ತು ಹುಡುಗಿಯರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಾಲಿಬಾನ್ ಅನ್ನು ಹೊಣೆಗಾರರನ್ನಾಗಿ ಮಾಡಲು ಸಾಮೂಹಿಕ ಕ್ರಮವನ್ನು ತೆಗೆದುಕೊಳ್ಳುವಂತೆ ಅವರು ವಿಶ್ವ ನಾಯಕರನ್ನು ಒತ್ತಾಯಿಸಿದ್ದಾರೆ.