ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮನಗೌಡ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಕೋಟ, ಸುಕ್ರಿ ಬೊಮ್ಮನಗೌಡರ ಚಿಕಿತ್ಸೆಯ ಸಂಪೂರ್ಣ ಖರ್ಚು ವೆಚ್ಚವನ್ನು ಸರಕಾರದಿಂದ ಭರಿಸುವಂತೆ ಹಾಗೂ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕ ಉಸ್ತುವಾರಿ ಮಂತ್ರಿಯಾಗಿ ನಾನು ಸುಕ್ರಿ ಬೊಮ್ಮನಗೌಡರನ್ನು ನೋಡಲು ಬಂದಿದ್ದೇನೆ, ಇದೀಗ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದು, ಸದ್ಯದಲ್ಲೇ ಮನೆಗೆ ಹಿಂತಿರುಗುತ್ತೇನೆ ಎಂದು ಹೇಳಿದ್ದಾರೆ. ಶೀಘ್ರ ಚೇತರಿಸಿಕೊಳ್ಳಲಿ ಎಂದು ಶ್ರೀನಿವಾಸ ಪೂಜಾರಿ ಹಾರೈಸಿದ್ದಾರೆ