ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಹೆಚ್.ಡಿ.ಕುಮಾರಸ್ವಾಮಿ

Prasthutha|

ಬೆಂಗಳೂರು: ಧರ್ಮದ ಹೆಸರಿನಲ್ಲಿಜನರ ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಜನರನ್ನು ಪ್ರಶ್ನೆ ಮಾಡಿದ್ದಾರೆ.

- Advertisement -

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಸಭೆಯನ್ನುದ್ದೇಶಿಸಿ ಮಾತಾಡಿದ ಅವರು ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮನವಿ ಮಾಡಿದರು.

ಇಂಥ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕೇ ಹೊರತು ಸಮಾಜವನ್ನು ಒಡೆಯಲು ಬೇಕಾಗಿ ಅಲ್ಲ ಎಂದು ಅವರು ಖಾರವಾಗಿ ನುಡಿದರು



Join Whatsapp