ಜೂನ್ ಹತ್ತರಂದು ರಾಜ್ಯಸಭಾ ಚುನಾವಣೆ | ಅಂದೇ ಮತ ಎಣಿಕೆ

Prasthutha|

  ಬೆಂಗಳೂರು: ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯ ಸಭೆಯ 57 ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ.

- Advertisement -

ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ, ಜೈರಾಮ್‌ ರಮೇಶ್, ಆಸ್ಕರ್ ಫರ್ನಾಂಡೀಸ್ ಮತ್ತು ನಿರ್ಮಲಾ ಸೀತಾರಾಮನ್ ಅವರ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದೆ.

ಮೇ 24ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಮೇ 31 ಕೊನೆಯ ದಿನಾಂಕ. ಜೂನ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 3 ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿರುತ್ತದೆ. ಜೂನ್ 10ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ 5 ಗಂಟೆಯ ನಂತರ ಮತಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 13ಕ್ಕೆ ಒಟ್ಟಾರೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.



Join Whatsapp