ಬೆಂಗಳೂರು: ನಾಡಪ್ರಭು ಕೆಂಪೇಗೌಡರನ್ನು ಮತ್ತು ರಾಷ್ಟ್ರ ಕವಿ ಕುವೆಂಪು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಋಷಿ ಕುಮಾರ ಸ್ವಾಮಿ ಯಾನೆ ಕಾಳಿ ಸ್ವಾಮಿ ವಿರುದ್ಧ ಕನ್ನಡಪರ ಸಂಘಟನೆಗಳು ಮಸಿ ಬಳಿದು ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಳಿ ನಡೆಸಲಾಗಿದೆ. ಕಾಳಿ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಪ್ಪು ಮಸಿ ಬಳೆದಿದ್ದಾರೆ. ಸದ್ಯ ಕಾಳಿ ಸ್ವಾಮಿ ಖಾಸಗಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಿಮಗೆ ಧಮ್ ಇದ್ರೆ ನೀವು ಗಂಡಸರಾದ್ರೆ ನ್ಯಾಯಾಲಯದಲ್ಲಿ ಸಾಬೀತು ಮಾಡಿ. ನಾನು ಇದಕ್ಕೆಲ್ಲ ಹೆದರಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಗೆ ಕಾಳಿ ಸ್ವಾಮಿ ಚ್ಯಾಲೆಂಜ್ ಕೂಡಾ ಹಾಕಿದ್ದಾರೆ.
ರಾಷ್ಟ್ರ ಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ಅವಮಾನಿಸಿದ ಆರೋಪ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡು ರಸ್ತೆಯಲ್ಲಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದಿದ್ದಾರೆ. ನಾಡಗೀತೆಯನ್ನ ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆಂದು ಕಾಳಿ ಸ್ವಾಮೀಜಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸೇಡು ತೀರಿಸಿಕೊಂಡಿದೆ