ಅಹ್ಮದಾಬಾದ್: ಗುಜರಾತಿನ ಖಂಭಾತ್ ನಲ್ಲಿ ರಾಮನವಮಿ ವೇಳೆ ನಡೆದ ಮುಸ್ಲಿಮ್ ವಿರೋಧಿ ಹಿಂಸಾಚಾರದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ಮುಸ್ಲಿಮರ ವಿರುದ್ಧ ಪಕ್ಷಪಾತ ಧೋರಣೆ ತೋರಿಸಿದ್ದಾರೆ ಮತ್ತು ಪ್ರತ್ಯಕ್ಷ, ಪರೋಕ್ಷವಾಗಿ ಗಲಭೆಕೋರರನ್ನು ಬೆಂಬಲಿಸಿದ್ದಾರೆ ಎಂದು ಅವರು ಅರ್ಜಿಯಲ್ಲಿ ದೂರಲಾಗಿದೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, ಮೊದಲ ಪ್ರಕರಣದಲ್ಲಿ ಆನಂದ್ ಠಾಣೆಯ ಪೊಲೀಸರು 30ಕ್ಕೂ ಅಧಿಕ ಮುಸ್ಲಿಮರನ್ನು ಬಂಧಿಸಿದ್ದಾರೆ. ಎರಡನೇ ಪ್ರಕರಣವನ್ನು ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ.
ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾರದರ್ಶಕವಲ್ಲದ, ಅನ್ಯಾಯದ, ತಾರತಮ್ಯದ ನೀತಿಯನ್ನು ಅನುಸರಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖೆಯು ಸಿವಿಲ್ ಮತ್ತು ಕ್ರಿಮಿನಲ್ ಕ್ರಮವನ್ನು ತೆಗೆಯಲು ನ್ಯಾಯಾಲಯದ ಮಧ್ಯಸ್ಥಿಕೆ ವಹಿಸುವಂತೆ ಅರ್ಜಿಯಲ್ಲಿ ನಮೂದಿಸಲಾಗಿದೆ.
ಕಳೆದ ತಿಂಗಳು ರಾಮನವಮಿ ಮೆರವಣಿಗೆ ಮತ್ತು ಶೋಭಾಯಾತ್ರೆಯ ಸಂದರ್ಭದಲ್ಲಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ಆಸ್ತಿ, ಮನೆ ಮತ್ತು ಅಂಗಡಿಗಳನ್ನು ಧ್ವಂಸ ನಡೆಸಿದ್ದರು. ಇದರಲ್ಲಿ ಒಂದು ದರ್ಗಾಕ್ಕೆ ಭಾಗಶಃ ಹಾನಿಯಾಗಿದೆ ಎಂದು ತಿಳಿದು ಬಂದಿದೆ.