ದೆಹಲಿಯಲ್ಲಿ ಭಾರಿ ಬೆಂಕಿ ಅವಘಡ: ಮೃತರ ಸಂಖ್ಯೆ 27ಕ್ಕೆ ಏರಿಕೆ

Prasthutha|

ದೆಹಲಿ: ಇಲ್ಲಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ನಿನ್ನೆ 26 ಮಂದಿ ಮೃತಪಟ್ಟಿದ್ದು, ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಾವಿನ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

- Advertisement -

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು,  ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಇದುವರೆಗೆ ಸುಮಾರು 70 ಜನರನ್ನು ಕಟ್ಟಡದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp