ಪಂಜಾಬ್: ರಾಜ್ಯದ ಜೈಲುಗಳಲ್ಲಿನ ವಿಐಪಿ ಸಂಸ್ಕೃತಿಯನ್ನು ಕೊನೆಗಾಣಿಸುವ ಪ್ರಯತ್ನದಲ್ಲಿ, ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಜೈಲುಗಳಲ್ಲಿರುವ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್ ಗಳಾಗಿ ಪರಿವರ್ತಿಸುವುದಾಗಿ ಘೋಷಿಸಿದೆ.
ರಾಜ್ಯ ಸರ್ಕಾರವು ತೆಗೆದುಕೊಂಡ ಈ ಕ್ರಮವು ಜೈಲು ಸಿಬ್ಬಂದಿಯ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸುತ್ತದೆ. ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುವ ಉದ್ದೇಶದಿಂದ, ಜೈಲು ಸಿಬ್ಬಂದಿಯ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಜೈಲುಗಳಲ್ಲಿನ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್ ಗಳಾಗಿ ಪರಿವರ್ತಿಸಲಾಗುವುದು’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದರು.
ಇನ್ನು ಜೈಲಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.