ಬೆಂಗಳೂರು: ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದಾಗಿ ಶನಿವಾರ ರಾತ್ರಿ ಅಸುನೀಗಿದ್ದಾಳೆ.
ಜಿಟಿಡಿ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು ಗೌರಿ(3) ಮೃತಪಟ್ಟವಳು ಎಂದು ತಿಳಿದು ಬಂದಿದೆ.
ಗೌರಿ ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ ನಿಧನ ಹೊಂದಿದ್ದಾಳೆ.
ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ.ಟಿ ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.