ತುಮಕೂರು : ಮದುವೆಗೆ ಹತ್ತು ದಿನ ಬಾಕಿ ಇರುವಾಗಲೇ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
ತೇಜ (19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ.
ಮೇ 24 ಮತ್ತು 25ರಂದು ಈಕೆಯ ವಿವಾಹ ನಿಶ್ಚಯವಾಗಿತ್ತು. ಪೋಷಕರು ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಕೊಟ್ಟು ಆಹ್ವಾನಿಸುವ ಸಿದ್ಧತೆಯಲ್ಲಿ ತೊಡಗಿದ್ದರು. ಆದ್ರೆ, ಇಂದು ಮುಂಜಾನೆ ಮನೆಯಲ್ಲಿಯೇ ಯುವತಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.