ಮುಂಬೈ: ತಾಯಂದಿರ ದಿನದಂತೆ ‘ಪತ್ನಿಯರ ದಿನ’ವನ್ನೂ ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಈ ಬಗ್ಗೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಮಾತನಾಡಿದ ಅವರು, ‘ತಾಯಿಯು ಜನ್ಮ ನೀಡಿದರೆ, ಪತ್ನಿಯು ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ತನ್ನ ಪತಿಗೆ ಬೆಂಬಲವಾಗಿ ನಿಲ್ಲುತ್ತಾಳೆ. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೊಬ್ಬ ಮಹಿಳೆ ಇರುತ್ತಾಳೆ. ಆದ್ದರಿಂದ ನಾವು ಪತ್ನಿಯರ ದಿನವನ್ನು ಆಚರಿಸಬೇಕು ಎಂದರು.