ಚಿಕ್ಕಮಗಳೂರು : ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ.

Prasthutha|

ಮೂಡಿಗೆರೆ : ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಕೊಕನ್ ಜ್ಯೂಸ್ ತಯಾರಿಸಿ ಮೂಡಿಗೆರೆ‌ ಕಡೆ ಕ್ವಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

 ಬಂಧಿತ ಆರೋಪಿಗಳನ್ನುಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಅಬೂಬಕ್ಕರ್ ಸಿದ್ದಿಕ್(31) , ಮೂಡಿಗೆರೆಯ ಅಮೃತ್ ಬಿಜುವಳ್ಳಿ , ಮೂಡಿಗೆರೆ ಟೌನ್ ನಿವಾಸಿ ರಿಷಬ್ ರಾಜ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯ ಅಬೂಬಕ್ಕರ್ ಸಿದ್ದಿಕ್ ಗೆ ಸೇರಿದ ಕ್ವಾಲಿಸ್ ಕಾರಿನಲ್ಲಿ 250 ಗ್ರಾಂ ಗಾಂಜಾ ಪತ್ತೆ ಹಚ್ಚಲಾಗಿದ್ದು, ಒಂದು ಬೈಕ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌. ಕಾರ್ಯಾಚರಣೆಯಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್ ಸೋಮಶೇಖರ್, ಗಿರೀಶ್ BC, ಸುರೇಶ್, ಜಯಕುಮಾರ್, ಪ್ರದೀಪ್, ಉಮೇಶ್, ಮನುಕುಮಾರ್ ಇದ್ದರು.



Join Whatsapp