ಬೆಂಗಳೂರು: ಬೊಜ್ಜು ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಮೃತಪಟ್ಟಿದ್ದಾರೆ.
ಚೇತನಾ ರಾಜ್ (21) ಮೃತಪಟ್ಟ ನಟಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ದಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಾರೆ.