ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿಯ ರಘುನಾಥ್ ರಾವ್ ಮಲ್ಕಾಪುರೆ ನೇಮಕ

Prasthutha|

ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಸಭಾಪತಿ ಹುದ್ದೆಗೆ ಇನ್ನಷ್ಟೇ ಚುನಾವಣೆ ನಡೆಯಬೇಕಿದೆ. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಮಲ್ಕಾಪುರೆ ಅವರು ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

- Advertisement -


ರಘುನಾಥ್ ರಾವ್ ಮಲ್ಕಾಪುರೆ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 117ರಲ್ಲಿ ಅಧಿಕಾರ ಸ್ವೀಕರಿಸಿದರು. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ಮೇ 16ರಂದು ರಾಜೀನಾಮೆ ನೀಡಿದ್ದರು. ನಿಯಮಾವಳಿಗಳ ಪ್ರಕಾರ ಸಭಾಪತಿ ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ನೀಡಬೇಕಾಗುತ್ತದೆ. ಸದ್ಯ ಉಪಸಭಾಪತಿ ಸ್ಥಾನವೂ ಖಾಲಿ ಇದೆ. ಈ ಕಾರಣದಿಂದ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಆವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು. ವಿಧಾನ ಪರಿಷತ್ ಸದಸ್ಯರಾಗಿರುವ ರಘುನಾಥ್ ರಾವ್ ಮಲ್ಕಾಪುರೆ ಮೂಲತಃ ಬೀದರ್ ಜಿಲ್ಲೆಯವರು. ವಿಧಾನ ಪರಿಷತ್ತಿಗೆ 2012 ಮತ್ತು 2018ರಲ್ಲಿ ಎರಡು ಬಾರಿ ಆಯ್ಕೆಯಾಗಿದ್ದಾರೆ.


ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದರು



Join Whatsapp