ಮೈಸೂರು: ಮೈಸೂರಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗುರುವಾರ ಬೆಳಗ್ಗೆ ಭೇಟಿ ನೀಡಿದರು.
ಜಿ.ಟಿ.ದೇವೇಗೌಡ ಅವರ ಮೊಮ್ಮಗಳ ನಿಧನಕ್ಕೆ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್,ಸಂಸದ ಪ್ರತಾಪ್ ಸಿಂಹ, ಶಾಸಕರಾದ ನಿರಂಜನ್, ಮಹೇಶ್, ಮಾಜಿ ಸಚಿವ ವಿಜಯ್ ಶಂಕರ್, ಮೂಡಾ ಅಧ್ಯಕ್ಷ ರಾಜೀವ್ ಹಲವರು ಉಪಸ್ಥಿತರಿದ್ದರು.