ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ಸುಳ್ಳು ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕುರ್ರಹ್ಮಾನ್ ಹೇಳಿದ್ದಾರೆ.
ಪ್ರತಿಯೊಂದು ಮಸೀದಿಯನ್ನೂ ಈಗ ಅನುಮಾನದಿಂದ ನೋಡಲಾಗುತ್ತಿದೆ. ಹಿಂದೂಗಳು ಮತ್ತು ಮುಸ್ಲಿಮರು ಇಂಥ ಅಪಪ್ರಚಾರ ತಡೆಯಬೇಕು ಎಂದು ಒತ್ತಾಯಿಸಿದರು.
ಮುಸ್ಲಿಮರು ತಮ್ಮ ಪೂಜಾ ಸ್ಥಳದಲ್ಲಿ ಶಿವಲಿಂಗವನ್ನು ಏಕೆ ಇಡುತ್ತಾರೆ? ನಮ್ಮಲ್ಲಿ ಮೂರ್ತಿ ಪೂಜೆ ಇಲ್ಲ. ಅದು ಷರಿಯತ್ ಗೆ ವಿರುದ್ಧವಾದದ್ದು ಎಂದು ಹೇಳಿದರು.
ದೇಶ ಮತ್ತು ಮುಸ್ಲಿಂ ಸಮುದಾಯವನ್ನು ಉಳಿಸಲು ವಕ್ಫ್ ಮಂಡಳಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಇತರರು ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.