ದಲಿತರ ಮದುವೆ ಮೆರವಣಿಗೆಗೆ ಕಲ್ಲು ತೂರಾಟ: ಆರೋಪಿಗಳ ಮನೆಗಳನ್ನು ಬುಲ್ಡೋಜರ್ ಮೂಲಕ ಕೆಡವಿದ ಮಧ್ಯಪ್ರದೇಶ ಸರ್ಕಾರ

Prasthutha|

ರಾಜಗಢ: ದಲಿತ ವ್ಯಕ್ತಿಯೊಬ್ಬರ ಮದುವೆ ಮೆರವಣಿಗೆಯ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಎಂಟು ಮಂದಿ ಆರೋಪಿಗಳ ಮನೆಯನ್ನು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್ ಮೂಲಕ ಧ್ವಂಸಗೊಳಿಸಿದೆ.

- Advertisement -

ರಾಜಗಢ ಜಿಲ್ಲೆಯ ಜಿರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ 21ಮಂದಿ ಆರೋಪಿಗಳ ಪೈಕಿ 8 ಮಂದಿಯ ಮನೆಗಳನ್ನು ಈಗಾಗಲೇ ನೆಲಸಮ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್‌ನೊಂದಿಗೆ ಕಂದಾಯ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಪೌರಕಾರ್ಮಿಕರು ಮನೆಗಳನ್ನು ನೆಲಸಮಗೊಳಿಸಿದ್ದಾರೆ.

ವಧುವಿನ ಕಡೆಯುವರು ವರನ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಡಿಜೆಯನ್ನೂ ಹಾಕಲಾಗಿತ್ತು. ಆದರೆ ಮೆರವಣಿಗೆಯು ಧಾರ್ಮಿಕ ಕೇಂದ್ರವೊಂದರ ಬಳಿ ಸಾಗಿದಾಗ ಡಿಜೆ ಹಾಕಿರುವುದಕ್ಕೆ ಕೆಲವರು ಆಕ್ಷೇಪಿಸಿದ್ದರು. ಹೀಗಾಗಿ ಧಾರ್ಮಿಕ ಕೇಂದ್ರದ ಬಳಿ ಡಿಜೆ ನಿಲ್ಲಿಸಲಾಗಿತ್ತು.ಧರ್ಮಿಕ ಕೇಂದ್ರ ದಾಟಿದ ಬಳಿಕ ಮತ್ತೆ ಹಾಕಲಾಗಿತ್ತು.

- Advertisement -

 ಆದರೂ ಕೆಲವು ಕಿಡಿಗೇಡಿಗಳು ಮೆರವಣಿಗೆ ಸಾಗುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮೂವರಿಗೆ ಗಾಯಗಳಾಗಿವೆ.

ವಧುವಿನ ತಂದೆಯ ದೂರಿನ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಲ್ಲದೆ, 21 ಆರೋಪಿಗಳನ್ನು  ಗುರುತಿಸಿದ್ದರು. ಈ ಪೈಕಿ ಎಂಟು ಮಂದಿಯ ಮನೆಯನ್ನು ಧ್ವಂಸ ಮಾಡಲಾಗಿದೆ.



Join Whatsapp