ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು ರಾಜ್ಯದಲ್ಲಿ ಐದು ವರ್ಷಕ್ಕಿಂತ ಕೆಳವಯಸ್ಸಿನ ಶೇ.35ರಷ್ಟು ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗಿದೆ ಎಂದು ವರದಿ ಮಾಡಿದೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಟ್ಚೀಟ್ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.
“ರಾಜ್ಯದ ಪ್ರತಿ ಮಗುವಿನ ಆರೋಗ್ಯವನ್ನು ಸುಸ್ಥಿರವಾಗಿರಿಸುವಷ್ಟು ಕರ್ನಾಟಕ ಸಂಪದ್ಭರಿತವಾಗಿದೆ ಎಂದು ನಾನು ನಂಬುತ್ತೇನೆ.” ಎಂದಿರುವ ಡಿ.ಕೆ ಶಿವಕುಮಾರ್, “5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ. 35% ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ ಎಂಬುದು ನೋವು ತರುವ ವಿಚಾರ.” ಎಂದು ಟ್ವೀಟ್ ಮಾಡಿದ್ದಾರೆ.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳು ಇದ್ದರೂ ಕೂಡ, ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷಾ ವರದಿಯು ಎಚ್ಚರಿಕೆಯ ಗಂಟೆಯಾಗಿದೆ. “ಕರ್ನಾಟಕದ ಮಕ್ಕಳಿಗಾಗಿ ಉತ್ತಮ ಭವಿಷ್ಯ ರೂಪುಗೊಳ್ಳಬೇಕಿದೆ.” ಎಂದಿರುವ ಕೆಪಿಸಿಸಿ ಅಧ್ಯಕ್ಷರು, ಮಕ್ಕಳ ಕುರಿತು ಇನ್ನೂ ಹೆಚ್ಚಿನ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ.