ಬ್ರಹ್ಮಾವರ: ನಡು ರಸ್ತೆಯಲ್ಲಿ ಸುಟ್ಟು ಕರಕಲಾದ ಕಾರೊಂದರಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿರುವ ಘಟನೆ ಹೆಗ್ಗುಂಜೆ ಗ್ರಾ.ಪಂ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಡೆದಿದೆ. ಈ ಜೋಡಿ ಆತ್ಮಹತ್ಯೆ ನಡೆಸಿರುವ ಸಾಧ್ಯತೆಯ ಕುರಿತು ಶಂಕೆ ವ್ಯಕ್ತವಾಗಿದೆ.
ಮೃತಪಟ್ಟವರು ಬೆಂಗಳೂರು ಆರ್. ಟಿ. ನಗರದ ಯಶವಂತ್ ಯಾದವ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ.
ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆಗೆ ಕಾರನ್ನು ಪಡೆದುಕೊಂಡು ಬ್ರಹ್ಮಾವರ ಕಡೆಗೆ ಬಂದಿದ್ದರು. ಸದ್ಯ ಇವರಿಬ್ಬರ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ.
ಈ ಮಧ್ಯೆ ಬ್ರಹ್ಮಾವರಕ್ಕೆ ಬಂದಿದ್ದ ಇವರು ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ನಡೆಸಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕಾಗಮಿಸಿದ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.