ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ರಾಜ್ಯದಲ್ಲಿ ವ್ಯಾಪಕ ಚರ್ಚೆ ಬೆನ್ನಲ್ಲೇ, ರೋಹಿತ್ ಚಕ್ರತೀರ್ಥನನ್ನು ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಿ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಚಕ್ರತೀರ್ಥರ ಪೋಸ್ಟ್ವೊಂದನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಅವರು, ಕೂಡಲೇ ಈತನನ್ನು ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶಿಕ್ಷಣ ತಜ್ಞರು, ವಿದ್ವಾಂಸರು ಇರಬೇಕಾದ ಪಠ್ಯ ಪುಸ್ತಕ ಸಮಿತಿಗೆ ₹2 ಟ್ರೋಲ್ ಗಳು ಇರುವುದು, ಬಿಜೆಪಿಯ ಬಾಡಿಗೆ ಭಾಷಣಕಾರರನ್ನು ಕೂರಿಸಿ ಮಕ್ಕಳಿಗೆ ಸುಳ್ಳಿನ ಶೂರರ ಪಾಠ ಹೇಳಿಸುವುದು ವಿಪರ್ಯಾಸ ಎಂದು ಖರ್ಗೆ ಹರಿಹಾಯ್ದಿದ್ದಾರೆ.
ನಾಡು, ನುಡಿಗೆ, ಕುವೆಂಪುರಂತಹವರಿಗೆ ಅವಮಾನಿಸಿದ ಈತನ ಟ್ರೋಲ್ ಪಾಂಡಿತ್ಯವೇ ಮಹತ್ತರ ಜವಾಬ್ದಾರಿಗೆ ಅರ್ಹತೆಯೇ? ಕೂಡಲೇ ಈತನನ್ನು ಕಿತ್ತೆಸೆದು ಮಕ್ಕಳ ಭವಿಷ್ಯವನ್ನು ಸರ್ಕಾರ ಕಾಪಾಡಬೇಕು’ ಎಂದು ಪ್ರಿಯಾಂಕ ಖರ್ಗೆ ಬರೆದು ಕೊಂಡಿದ್ದಾರೆ.