ಮುಂಬೈ: 100 ಕೋಟಿ ‘ಶೌಚಾಲಯ ಹಗರಣ’ದಲ್ಲಿ ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ದಂಪತಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧ ಕಿರಿಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಹೈಕೋರ್ಟಿನಲ್ಲಿ ಸೋಮವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ರಾವುತ್ ಅವರು 100 ಕೋಟಿ ಪರಿಹಾರ ಪಾವತಿಸಬೇಕು ಅಥವಾ ಈ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಠೇವಣಿ ಇಡಲು ನಿರ್ದೇಶನ ನೀಡುವಂತೆ ಕೋರಿ ಅವರು ಹೈಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.
ರಾವುತ್ ಅವರು ಪದೇ ಪದೇ ನನ್ನ ಮತ್ತು ನನ್ನ ಪತಿ ವಿರುದ್ಧ ಸಾರ್ವಜನಿಕವಾಗಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ. ಅದರಲ್ಲೂ ಸುಮಾರು 100 ಕೋಟಿಯ ಶೌಚಾಲಯ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಿದ್ದಾರೆ. ರಾವುತ್ ನನ್ನ ಮತ್ತು ನನ್ನ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಿ, ಮಧ್ಯಂತರ ಪರಿಹಾರ ನೀಡಬೇಕು ಎಂದು ಮೇಧಾ ನ್ಯಾಯಾಲಯವನ್ನು ಕೋರಿದ್ದಾರೆ.
ಸಂಸದ ಸಂಜಯ್ ರಾವುತ್ ವಿರುದ್ಧ ಬಿಜೆಪಿ ನಾಯಕನ ಪತ್ನಿಯಿಂದ ಮಾನನಷ್ಟ ಮೊಕದ್ದಮೆ
Prasthutha|