ಕೇರಳದ ವಿದ್ಯಾರ್ಥಿನಿಯ ವರದಕ್ಷಿಣೆ ಸಾವಿನ ಪ್ರಕರಣ: ಪತಿಗೆ 10 ವರ್ಷ ಜೈಲು ಶಿಕ್ಷೆ

Prasthutha|

ಕೊಲ್ಲಂ: ಕಳೆದ ವರ್ಷ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ವದಕ್ಷಿಣೆ ಕಿರುಕುಳಕ್ಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ ನಾಯರ್ ರ ಪತಿಗೆ ಇಂದು 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

- Advertisement -

ಕೊಲ್ಲಂ ನ್ಯಾಯಾಲಯವು ವಿಸ್ಮಯಾ ಅವರ  ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಪ್ರಕರಣಕ್ಕಾಗಿ ಕಿರಣ್ ಕುಮಾರ್‌ ಅಪರಾಧಿ ಎಂದು ಸೋಮವಾರ ತೀರ್ಪು ನೀಡಿದ್ದು, ಇದೀಗ 10 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಲಾಗಿದೆ.

“ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ” ಎಂದು ನ್ಯಾಯಾಲಯ ಹೇಳಿದೆ.

- Advertisement -

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಜಿತ್ ಕೆಎನ್ ರವರು,  ಕಿರಣ್ ಕುಮಾರ್ ನನ್ನು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ) ಮತ್ತು ಭಾರತೀಯ ದಂಡ ಸಂಹಿತೆಯ 304-ಬಿ (ವರದಕ್ಷಿಣೆ ಸಾವು) ಪ್ರಕರಣಗಳಡಿಯಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ.

 ಅಪರಾಧಿಗೆ ಮರಣದಂಡನೆ ವಿಧಿಸುವಂತೆ ನಾವು ನ್ಯಾಯಾಲಯದಲ್ಲಿ ಮನವಿ ಮಾಡುತ್ತೇವೆ  ಎಂದು ವಿಸ್ಮಯಾ ಪೋಷಕರ ಪರ ವಕೀಲರು ಹೇಳಿಕೆ ನೀಡಿದ್ದರು.



Join Whatsapp