ನವದೆಹಲಿ: ವಂದೇ ಮಾತರಂ ಹಾಡುಗಳಿಗೆ ರಾಷ್ಟ್ರಗೀತೆಯ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಇದಕ್ಕೆ ಸಂಬಂಧಿಸಿದಂತೆ ಅಭಿಪ್ರಾಯವನ್ನು ತಿಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ವಂದೇ ಮಾತರಂ, ಜನ ಗಣಮನ ಗೀತೆಗೆ ರಾಷ್ಟ್ರಗೀತೆಯ ಮಾನ್ಯತೆಯನ್ನು ನೀಡುವಂತೆ ಕೋರಿ ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ವಿಪಿನ್ ಸಂಘಿ, ಸಚಿನ್ ದತ್ತಾ ಅವರು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಈ ಬಗ್ಗೆ ಶಿಕ್ಷಣ ಸಂಶೋಧನೆ ಮತ್ತು ರಾಷ್ಟ್ರೀಯ ತರಬೇತಿ ಮಂಡಳಿಯ ಅಭಿಪ್ರಾಯವನ್ನು ಕೂಡ ತಿಳಿಸಬೇಕು ಎಂದು ತನ್ನ ಆದೇಶದಲ್ಲಿ ಸೂಚಿಸಿದೆ.